ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ಪುಂಡರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ

ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್​ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದ್ದರು.
ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಈ ಸಂದರ್ಭದಲ್ಲಿ ಪ್ರವೀಣ್ ಆ್ಯಂಡ್​ ಟೀಂ ಏಕಾಏಕಿಯಾಗೊ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್​​ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳು ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ವರದಿಯಾಗಿದೆ. ಹೆಚ್ಚುತ್ತಿರುವ ಗ್ಯಾಂಗ್ ವಾರ್​ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.
ಮೇ 18 ರಂದು ನಡೆದಿತ್ತು ಭಯಾನಕ ಗ್ಯಾಂಗ್​ ವಾರ್​:
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಅಲ್ಲದೆ ತಲವಾರು ಹಿಡಿದು, ಬಡಿದಾಡಿಕೊಂಡಿದ್ದವು. ನಗರವೆಲ್ಲ ಸೈಲೆಂಟ್‌ ಆಗಿರುವ ಹೊತ್ತಿಗೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್‌ ನಿವಾಸಿಗಳು ಕಂಡು ಬೆಚ್ಚಿಬಿದ್ದಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!