ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್ನನ್ನು ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದರು.
ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಈ ಸಂದರ್ಭದಲ್ಲಿ ಪ್ರವೀಣ್ ಆ್ಯಂಡ್ ಟೀಂ ಏಕಾಏಕಿಯಾಗೊ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳು ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ವರದಿಯಾಗಿದೆ. ಹೆಚ್ಚುತ್ತಿರುವ ಗ್ಯಾಂಗ್ ವಾರ್ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.
ಮೇ 18 ರಂದು ನಡೆದಿತ್ತು ಭಯಾನಕ ಗ್ಯಾಂಗ್ ವಾರ್:
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಅಲ್ಲದೆ ತಲವಾರು ಹಿಡಿದು, ಬಡಿದಾಡಿಕೊಂಡಿದ್ದವು. ನಗರವೆಲ್ಲ ಸೈಲೆಂಟ್ ಆಗಿರುವ ಹೊತ್ತಿಗೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್ ನಿವಾಸಿಗಳು ಕಂಡು ಬೆಚ್ಚಿಬಿದ್ದಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…