ಮುಲ್ಕಿ:ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ಬಳಿಯ ಎಸ್ ಕೋಡಿ ಎಂಬಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂತರ್ಜಲ ರಕ್ಷಣೆಯ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ ಹಾಗೂ ನಿಧಾನ ಗತಿಯಿಂದ ನಡೆಯುತ್ತಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ
ಕಳೆದ ವರ್ಷಗಳ ಹಿಂದೆ ಶಾಸಕ ಉಮಾನಾಥ ಕೋಟ್ಯಾನ್ ರವರು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಕೆರೆಯನ್ನು ಅಂತರ್ಜಲ ಅಭಿವೃದ್ಧಿ ನಿಟ್ಟಿನಲ್ಲಿ ಶಿಲಾನ್ಯಾಸ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದರು.

ಆದರೆ ಬರೋಬ್ಬರಿ ವರ್ಷದ ಬಳಿಕ ಕಳೆದ ತಿಂಗಳ ಹಿಂದೆ ಮಳೆಗಾಲದಲ್ಲಿ ಏಕಾಏಕಿ ಕಾಮಗಾರಿ ಆರಂಭಗೊಂಡಿದ್ದು ಮೊದಲ ಮಳೆಗೆ ಕೆರೆ ಮೇಲ್ಭಾಗದ ಮಣ್ಣು ಕೊಚ್ಚಿ ಹೋಗಿದೆ ಕೆರೆಯ ಒಳಬಾಗದಲ್ಲಿ ತಡೆಗೋಡೆ ನಿರ್ಮಿಸದ ಕಾರಣ ಮೇಲ್ಬಾಗದಲ್ಲಿ ಹಾಕಿದ ಮಣ್ಣುಮತ್ತೆ ಕೆರೆ ಪಾಲಾಗಿದೆ
ಅವೈಜ್ಞಾನಿಕ ಕಾಮಗಾರಿಯಿಂದ ಮಳೆಗಾಲದಲ್ಲಿ ಸುರಿಯುವ ಮಳೆಗೆ ಪುನಃ ಮಣ್ಣು ಕೊಚ್ಚಿ ಹೋಗುವ ಭೀತಿ ಎದುರಾಗಿದ್ದು ಜೊತೆಗೆ ಸಮೀಪದಲ್ಲಿ ರಾಜ್ಯ ಹೆದ್ದಾರಿ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯ 101 ಮನೆಗಳ ಸಂಪರ್ಕ ರಸ್ತೆಗೆ ಸಂಚಕಾರ ಉಂಟಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ
ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ಟ್ಯಾನಿ ಪಿಂಟೋ ಮಾತನಾಡಿ ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದ ಜನರ ತೆರಿಗೆ ಹಣ ಪೋಲಾಗುವ ಸಾಧ್ಯತೆಯಿದ್ದು ಈ ಬಗ್ಗೆ ಶಾಸಕರು ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತು ಕಾಮಗಾರಿ ಬಗ್ಗೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪಟ್ಟಣ ಪಂಚಾಯತಿ ಜೂನಿಯರ್ ಇಂಜಿನಿಯರ್ ನಾಗರಾಜ್ ಮಾತನಾಡಿ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸ್ಥಳೀಯರ ದೂರಿನಿಂದ ಗಮನಕ್ಕೆ ಬಂದಿದ್ದು
20 ಲಕ್ಷದ ಕಾಮಗಾರಿಯಲ್ಲಿ ಇದುವರೆಗೂ ಗುತ್ತಿಗೆದಾರರಿಗೆ ಹಣ ಸಂದಾಯವಾಗಿಲ್ಲ ಸಮರ್ಪಕ ಕಾಮಗಾರಿ ನಡೆದ ಮೇಲೆ ಅಧಿಕಾರಿಗಳಿಂದ ಪರಿಶೀಲಿಸಿ ಬಿಲ್ ಮಾಡಲಾಗುವುದು ಎಂದರು.



