ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

14 ತಿಂಗಳ ಮಗುವಿನ ಕಿಡ್ನಿ 58 ವರ್ಷದ ಮಹಿಳೆಗೆ ಕಸಿ; ಹೈದರಾಬಾದ್ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಪ್ರಶಂಸೆ.

ಹೈದರಬಾದ್ : ಮೃತಪಟ್ಟ ಮೇಲೆ ದೇಹವನ್ನು ವ್ಯರ್ಥವಾಗಿ ಮಣ್ಣು ಮಾಡುವುದಕ್ಕಿಂತ ಅಂಗಾಂಗ ದಾನ ಮಾಡಿದರೆ ಇನ್ನೊಂದು ಜೀವವಾದರೂ ಬದುಕುಳಿಯುವಂತೆ ಮಾಡಬಹುದು. ಅಂಥದ್ದೇ ದಿಟ್ಟ ನಿರ್ಧಾರ ಕೈಗೊಂಡಿದೆ 14 ತಿಂಗಳ ಪುಟ್ಟ ಕೂಸಿನ ಕುಟುಂಬ. ಮೆದುಳು ನಿಷ್ಕ್ರಿಯಗೊಂಡಿದ್ದ ಮಗುವಿನ ಮೂತ್ರಪಿಂಡವನ್ನು 58 ವರ್ಷದ ಮಹಿಳೆಗೆ ದಾನ ಮಾಡಲಾಗಿದೆ. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.ಕಳೆದ 7 ವರ್ಷಗಳಿಂದ ಮಹಿಳೆ ಮೂತ್ರಪಿಂಡ ಸಮಸ್ಯೆಯಿಂದಾಗಿ ಡಯಾಲಿಸಿಸ್‌ಗೆ ಒಳಗಾಗಿದ್ದರು. ಇದೇ ವೇಳೆ 14 ತಿಂಗಳ ಕೂಸಿನ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರು ಮಗು ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದಾಗ, ಅಂಗಾಂಗ ದಾನಕ್ಕೆ ಮುಂದಾದರು. ಅದರಂತೆ ಮೂತ್ರಪಿಂಡವನ್ನು ಅಗತ್ಯವಿರುವ ಮಹಿಳೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಅಲ್ಲಿನ ವೈದ್ಯರು ನಡೆಸಿದ್ದಾರೆ. ಚಿಕ್ಕ ಮಕ್ಕಳ ಅಂಗಗಳು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ ವಯಸ್ಸಾದ ಜನರಲ್ಲಿ ಅಳವಡಿಸುವಲ್ಲಿ ಹಲವು ತೊಡಕುಗಳು ಉಂಟಾಗುತ್ತವೆ. ಇದೆಲ್ಲವನ್ನೂ ಮೀರಿ ನುರಿತ ವೈದ್ಯರು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳ ನೆರವಿನಿಂದ ಈ ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!