ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ದಾನಿಗಳಾದ ಅಬ್ದುಲ್ ಲತೀಫ್ ಹಾಗೂ ದಿ. ಗುಣಪಾಲ ಶೆಟ್ಟಿ ಶಕುಂತಲಾ ಶೆಟ್ಟಿ ಸ್ಮರಣಾರ್ಥ ಅವರ ಮಕ್ಕಳಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುಶಾಂತಪ್ಪ ಮಾತನಾಡಿ ಸರಕಾರ, ದಾನಿಗಳ ಹಾಗೂ ಶಿಕ್ಷಕರ ನೆರವಿನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಳವೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ದೊರೆಯುತ್ತಿದ್ದು ನಿರಂತರವಾಗಿ ನಡೆಯಲಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯ ಸೀತಾರಾಮ,ವಿದ್ಯಾನಿಧಿ ಸದಸ್ಯ ಎಂ ಕೃಷ್ಣ ಹೆಬ್ಬಾರ್, ದಾನಿಗಳಾದ ಅಬ್ದುಲ್ ಲತೀಫ್, ಅಂಗನವಾಡಿ ಶಿಕ್ಷಕಿ ಪ್ರೇಮಲತಾ, ಸಹಾಯಕಿ ವಿಶಾಂತಿ, ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದಾನಿಗಳಾದ ಸರಸ್ವತಿ ಮೋಹನ್ ರವರಿಂದ ಅಂಗನವಾಡಿ ಕೇಂದ್ರಕ್ಕೆ ಒಂದು ವರ್ಷಕ್ಕೆ ಉಚಿತ ತರಕಾರಿ ವಿತರಿಸಿದರು.ಬಳಿಕ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು



