ಮುಲ್ಕಿಯಲ್ಲಿ ಕಾರ್ಯಾಚರಿಸುತ್ತಿರುವ ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನಗುಮೊಗದ ಸೇವೆಗಳನ್ನು ನೀಡುತ್ತಾ ಬಂದಿದೆ. ಇದರ ಜೊತೆ ಜೊತೆಗೆ ಸಮಾಜಮುಖಿಯಾದ ಕಾರ್ಯಕ್ರಮಗಳನ್ನ ಮಾಡುತ್ತಿದ್ದು, ಇದೀಗ ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್, ಮುಲ್ಕಿ ಹಾಗೂ ಯುವಪಡೆ, ಮುಲ್ಕಿ ಇವರ ಜಂಟಿಯಲ್ಲಿ ಆರ್ಥಿಕ ನೆರವು ವಿತರಣೆ ಸಮಾರಂಭ ನಡೆಯಲಿದೆ.

ಹೌದು, 2024-2024 ನೇ ಸಾಲಿನ ಮುಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ-ಸಮವಸ್ತç ಹೊಲಿಸಲು ಆರ್ಥಿಕ ನೆರವು ವಿತರಣೆ ಸಮಾರಂಭ ಇದೇ ಬರುವ ಜುಲೈ 01 ರಂದು ಬೆಳಗ್ಗೆ 10; 30ಕ್ಕೆ ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ ಸ್ಟೋರ್ ಮುಲ್ಕಿ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಮುಲ್ಕಿ ಕಾರ್ನಾಡ್‌ನಲ್ಲಿರುವ ಕೊಸೆಸಾಂವ್ ಅಮ್ಮನವರ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾದರ್ ಆಂತೊನಿ ಶೆರಾ ಅವರು ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಸುರಭಿ ಎಲೆಕ್ಟಾçನಿಕ್ಸ್ ಆ್ಯಂಡ್ ಫರ್ನಿಚರ್ ಇದರ ಮಾಲಕರಾದ ಜೋನ್ ಕ್ವಾಡ್ರಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುಲ್ಕಿ- ಮೂಡಬಿದ್ರಿ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮುಲ್ಕಿಯ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾದರ್ ಬೈಕೇರಿಕರ್, ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ಬಾಲಚಂದ್ರ ಕಾಮತ್ ಭಾಗಿಯಾಗಲಿದ್ದಾರೆ. ಇನ್ನು ಸುರಭಿ ಎಲೆಕ್ಟಾçನಿಕ್ಸ್ ಆ್ಯಂಡ್ ಫರ್ನಿಚರ್ ಗ್ರಾಹಕರಿಗೆ ಉತ್ಕೃಷ್ಟ ಗುಣಮಟ್ಟದ ಸೇವೆಗಳನ್ನು ನೀಡುವುದರ ಒಟ್ಟಿಗೆ ಕಲಿಯುವ ಹಂಬಲದಲ್ಲಿ ವಿದ್ಯಾರ್ಥಿಗಳ ಬದುಕಿಗೂ ಆಸರೆಯಾಗುವಂಥ ದಿಟ್ಟ ಕಾರ್ಯಕ್ರಮವನ್ನು ಮಾಡ್ತಾ ಇರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.



