ಜನ ಮನದ ನಾಡಿ ಮಿಡಿತ

Advertisement

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ: ಕರುಣಾಕರ ಶೆಟ್ಟಿ ಮದ್ಯಗುತ್ತು

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಸಿ.ಎಂ.ಡಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.

ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟ್‌ ನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಯಕ್ಷಧ್ರುವ ಪಟ್ಲ ಪೌಂಡೇಶನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ ದಾನಿಗಳ ನೆರವಿನಿಂದ ಪಟ್ಲ ಪೌಂಡೇಶನ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ ಮನೆ ನಿರ್ಮಾಣ ಇಂತಹ ಸಮಾಜ ಮುಖಿ ಕೆಲಸಗಳಿಗೆ ಸುಮಾರು 10 ಕೋಟಿವರೆಗೆ ಸಹಾಯಧನ ನೀಡಿದ್ದು ಪ್ರಸಕ್ತ ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು10000 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ಯನ್ನು ನೀಡುತ್ತಿದ್ದೇವೆ ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು. ವೇದಿಕೆಯಲ್ಲಿ ಉದ್ಯಮಿ ಮಾಧವ ಶೆಟ್ಟಿ ಬಾಳ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಯಕ್ಷಗಾನ ಶಿಕ್ಷಕಿ ಪೂರ್ಣಿಮ ಯತೀಶ್ ರೈ ,ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಉಪಸ್ಥಿತರಿದ್ದರು. ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ ಸ್ವಾಗತಿಸಿ ಶಿಕ್ಷಕ ಹರೀಶ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!