ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಸಿ.ಎಂ.ಡಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟ್ ನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಯಕ್ಷಧ್ರುವ ಪಟ್ಲ ಪೌಂಡೇಶನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ ದಾನಿಗಳ ನೆರವಿನಿಂದ ಪಟ್ಲ ಪೌಂಡೇಶನ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ ಮನೆ ನಿರ್ಮಾಣ ಇಂತಹ ಸಮಾಜ ಮುಖಿ ಕೆಲಸಗಳಿಗೆ ಸುಮಾರು 10 ಕೋಟಿವರೆಗೆ ಸಹಾಯಧನ ನೀಡಿದ್ದು ಪ್ರಸಕ್ತ ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು10000 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ಯನ್ನು ನೀಡುತ್ತಿದ್ದೇವೆ ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು. ವೇದಿಕೆಯಲ್ಲಿ ಉದ್ಯಮಿ ಮಾಧವ ಶೆಟ್ಟಿ ಬಾಳ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಯಕ್ಷಗಾನ ಶಿಕ್ಷಕಿ ಪೂರ್ಣಿಮ ಯತೀಶ್ ರೈ ,ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಉಪಸ್ಥಿತರಿದ್ದರು. ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ ಸ್ವಾಗತಿಸಿ ಶಿಕ್ಷಕ ಹರೀಶ್ ಧನ್ಯವಾದ ಸಮರ್ಪಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…