ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ: ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟಿನ ಎದುರು ನೆರೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಳನುಗ್ಗಲು ಪ್ರಯತ್ನಿಸಿದರು. ಆದರೆ ಪೊಲೀಸರು ಗೇಟು ಹಾಕಿ ಪ್ರತಿಭಟನಕಾರರು ಒಳ ಪ್ರವೇಶಿಸಿದಂತೆ ತಡೆದರು. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿ ಗೇಟ್ ಅನ್ನು ತಳ್ಳಿಕೊಂಡು ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಹಿಡಿದರು. ಈ ವೇಳೆ ಕೆಲಕಾಲ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಸಂಘರ್ಷ ಉಂಟಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!