ಜನ ಮನದ ನಾಡಿ ಮಿಡಿತ

Advertisement

ಜೈನ ಮುನಿಗಳ ಹತ್ಯೆಗೆ ಸುನಿಲ್ ಕುಮಾರ್ ಖಂಡನೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ. ಮನಸ್ಸನ್ನು ಅತೀವ ಘಾಸಿಗೊಳಿಸಿದೆ ಎಂದು ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಸಾಧು, ಸಂತರು ಶಾಂತಿಪ್ರೀಯರು, ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಹಿಂಸೆ, ಶಾಂತಿ ಬಯಸುವವರು. ಅಂತಹ ಸಾಧು ಸಂತರನ್ನೆ ಈ ರೀತಿ ಹೀನಾಯ ಕೃತ್ಯವೆಸಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ. ಹತ್ಯೆ ಕುರಿತು ಸೂಕ್ತ ತನಿಖೆ ನಡೆದು ಘೋರ ಕೃತ್ಯವೆಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!