ಉಡುಪಿ: ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಸಿಟಿ ಬಸ್ ವೊಂದು ಹಿಂಮುಖವಾಗಿ ಚಲಿಸಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ಇಂದು ಸಂಜೆ ಸಂಭವಿಸಿದೆ.
ಎಚ್ ಎಂಟಿ ಸಿಟಿ ಬಸ್ ಪರ್ಕಳದಿಂದ ಮಣಿಪಾಲದ ಕಡೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು. ಬಸ್ ಕೆಳಪರ್ಕಳದ ಏರಿನಲ್ಲಿ ಬರುತ್ತಿದ್ದಂತೆ ಚಾಲಕ ಕೃಷ್ಣ ಎಂಬವರಿಗೆ ಹಠಾತ್ ಆಗಿ ಫಿಟ್ಸ್ ಬಂದಿದೆ. ಇದರಿಂದ ಏಕಾಏಕಿಯಾಗಿ ಬಸ್ ಹಿಂದಕ್ಕೆ ಚಲಿಸಿ ಕಂದಕಕ್ಕೆ ನುಗ್ಗಿದೆ. ಕೆಲವು ಪ್ರಯಾಣಿಕರು ಬಸ್ ನಿಂದ ಜಿಗಿದು ತಮ್ಮ ಪ್ರಾಣವನ್ನು ರಕ್ಷಿಸಿಕೊಂಡರು. ಅದೃಷ್ಟವಶಾತ್ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಲಕ ಕೃಷ್ಣ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…