ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ನಿನ್ನಯಷ್ಟೇ ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಇಂದು ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.
ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು. ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಅಪಾಯದಂಚಿನಲ್ಲಿ ಇರುವ ಇನ್ನಷ್ಟು ಮನೆಮಂದಿಗೆ ಬಾಡಿಗೆ ಮನೆಗಳನ್ನು ಗುರುತಿಸಿ ಮೂರು ತಿಂಗಳುಗಳ ಬಾಡಿಗೆಯನ್ನು ಸರಕಾರ ಭರಿಸಲಿದೆ ಎಂದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…