ಜನ ಮನದ ನಾಡಿ ಮಿಡಿತ

Advertisement

ಮೈಸೂರಿನಲ್ಲಿ ಎರಡು ಗುಂಪುಗಳ ನಡುವೆ ಗಲಭೆ; ಯುವ ಬ್ರಿಗೇಡ್​​ನ ಕಾರ್ಯಕರ್ತನ ಹತ್ಯೆ

ಮೈಸೂರು : ಎರಡು ಗುಂಪುಗಳ ನಡುವಿನ ಘರ್ಷಣೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂದು ಗುರುತಿಸಲಾಗಿದೆ. ವೇಣುಗೋಪಾಲ್​ ಯುವ ಬ್ರಿಗೇಡ್​​ನ ಕಾರ್ಯಕರ್ತ ಎಂದು ತಿಳಿದುಬಂದಿದೆ.

ಶನಿವಾರ ಹನುಮ ಜಯಂತಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ಥಳದಲ್ಲಿದ್ದ ಕೆಲವರು ಉಭಯ ಗುಂಪುಗಳನ್ನು ಶಾಂತಗೊಳಿಸಲು ಪ್ರಯತ್ನಪಟ್ಟರು. ಇದಾದ ನಂತರ ಮತ್ತೆ ಗಲಾಟೆ ನಡೆದು ಓರ್ವನ ಕೊಲೆ ನಡೆದಿದೆ.

ಸ್ಥಳಕ್ಕೆ ಡಿವೈಎಸ್ ಪಿ. ಗೋವಿಂದರಾಜು, ನರಸೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮೃತದೇಹವನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ನೂರಾರು ಯುವಕರು ಜಮಾಯಿಸಿದ್ದರು.

ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ : ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದರು. ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿದರು. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!