ಮೈಸೂರು : ಎರಡು ಗುಂಪುಗಳ ನಡುವಿನ ಘರ್ಷಣೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂದು ಗುರುತಿಸಲಾಗಿದೆ. ವೇಣುಗೋಪಾಲ್ ಯುವ ಬ್ರಿಗೇಡ್ನ ಕಾರ್ಯಕರ್ತ ಎಂದು ತಿಳಿದುಬಂದಿದೆ.
ಶನಿವಾರ ಹನುಮ ಜಯಂತಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ಥಳದಲ್ಲಿದ್ದ ಕೆಲವರು ಉಭಯ ಗುಂಪುಗಳನ್ನು ಶಾಂತಗೊಳಿಸಲು ಪ್ರಯತ್ನಪಟ್ಟರು. ಇದಾದ ನಂತರ ಮತ್ತೆ ಗಲಾಟೆ ನಡೆದು ಓರ್ವನ ಕೊಲೆ ನಡೆದಿದೆ.
ಸ್ಥಳಕ್ಕೆ ಡಿವೈಎಸ್ ಪಿ. ಗೋವಿಂದರಾಜು, ನರಸೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮೃತದೇಹವನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ನೂರಾರು ಯುವಕರು ಜಮಾಯಿಸಿದ್ದರು.
ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ : ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದರು. ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿದರು. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…