ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…