ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಸಮೀಪದ ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಬಳಿಯಲ್ಲಿ ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದರು.

ಅದರಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಪೊಲೀಸ್ ಹಾಗೂ ಮುಲ್ಕಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಕಿಲ್ಪಾಡಿ ಪಂಚಾಯತ್ ವತಿಯಿಂದ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಳಿಸಿ ವಾಹನಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ ಅಪಾಯಕಾರಿ ಒಣಗಿದ ಮರಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ,ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಪಿಡಿಓ ಪೂರ್ಣಿಮಾ, ಮೆಸ್ಕಾಂ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಮತ್ತು ಸಾಮಾಜಿಕ ಕಾರ್ಯಕರ್ತ ಭೀಮಾಶಂಕರ್ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಹೆದ್ದಾರಿಯ ಕಾರ್ನಾಡ್, ಕೆಂಚನಕೆರೆ,, ಕುಬೆವೂರು ಬಳಿ ಇನ್ನಷ್ಟು ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗ ಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.



