ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು 27 ರಂದು ಆಶ್ರಯ ಹೋಟೆಲ್ ನಲ್ಲಿ ನಡೆದ ಸರಳ ಸುಂದರ ಸಮಾರಂಭ ನಡೆಯಿತು. ರೋಟರಿ ನಿಯೋಜಿತ ಗವರ್ನರ್ ಕೆ.ಪಾಲಾಕ್ಷ ರವರು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು.
ತನ್ನ ತಂದೆಯ ಉದಾತ್ತ ಗುಣಗಳನ್ನು ಮೈಗೂಡಿಸಿಕೊಂಡು, ಸರಳ ಸಜ್ಜನಿಕೆಯೊಂದಿಗೆ,
ಸಮಾಜದ ಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾ, ತಾನು ಸಂಪಾಧಿಸಿದ ಸಂಪಾದನೆಯಲ್ಲಿ ಒಂದಷ್ಟನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ ಸಮಾಜ ಸೇವಕರೆನಿಸಿ ಕೊಂಡಿರುವ, ಪೆಟ್ರೋಲ್ ಪಂಪ್ ಮತ್ತು ಕ್ರಷರ್ ಮಾಲಿಕರೂ ಆಗಿರುವ ಶ್ರೀ ಶ್ರೀಧರ್ ಶೆಟ್ಟಿಯವರು ರೋಟರಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಬ್ರಹ್ಮಾವರ ರೋಟರಿ ಕ್ಲಬ್ ಉತ್ತಮ ಕಾರ್ಯಕ್ರಮಗಳು ಮತ್ತು ಸಮಾಜ ಸೇವೆಯ ಮೂಲಕ ಜನ ಮಾನಸದಲ್ಲಿ ತನ್ನದೇ ಒಂದು ವಿಶೇಷ ಸ್ಥಾನವನ್ನು ಸ್ಥಾಪಿಸುವಲ್ಲಿ ಯಶಸ್ವೀಯಾಗಿದೆ.
ತನ್ನ ಅಧ್ಯಕ್ಷೀಯ ಅವಧಿಯಲ್ಲಿ ರೋಟರಿ ಸಂಸ್ಥೆ ಮಾಡಿಕೊಂಡು ಬಂದಿರುವ ಕಾರ್ಯಕ್ರಮಗಳನ್ನು ಮುಂದುವರಿಸುತ್ತಾ, ಇನ್ನಷ್ಟು ಒಳ್ಳೆಯ ಹೊಸ ಕಾರ್ಯಕ್ರಮಗಳು ಮತ್ತು ಉತ್ತಮ ಕಾರ್ಯದಕ್ಷತೆಯೊಂದಿಗೆ ಕಾರ್ಯ ನಿರ್ವಹಿಸುತ್ತಾ ರೋಟರಿ ಸಂಸ್ಥೆಯ ಕೀರ್ತಿಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿ ಪ್ರಜ್ಞಾನ್ .ಪಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.ಹರೀಶ್ ಕುಂದರ್ ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಹಾಗೂ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ನಿಂದ ಕ್ಲಬ್ ಗೆ ಧನ ಸಹಾಯ ಹಸ್ತಾಂತರಿಸಲಾಯಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…