ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್ 30 ರಂದು ನಿಧನರಾದರು.
ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಉಡುಪಿ, ದಕ್ಷಿಣ ಕನ್ನಡದ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.



