ಉಡುಪಿ: ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿಶಿಷ್ಟ ಪ್ರತಿಭಟನೆ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಕಳ ಮಂಡಲ ಸದಸ್ಯರು ಹಾಲಿಲ್ಲದ ಚಹಾ ತಯಾರಿಸಿ ಕುಡಿಯುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಅಗತ್ಯ ವಸ್ತುಗಳ ಬೆಲೆ
ಹಾಲಿನ ದರ ಏರಿಕೆಯಾಗಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆಯ ವಿಚಾರವಾಗಿ , ಈ ಮೂಲಕ ಸಾಮಾನ್ಯ ಗ್ರಾಹಕರಿಗೆ ಹಾಲಿನ ದರ ಏರಿಕೆಯಿಂದ ಉಂಟಾಗಿರುವ ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಲು ಪ್ರಯತ್ನಿಸಿದರು.



