ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಭಾನುವಾರ ಸಾಧಾರಣ ಮಳೆಯಾಗಿದ್ದು ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಬಿಸಿಲು ಮಂಗಳೂರಿನಲ್ಲಿ ಬೆಳಗ್ಗೆ ಸ್ವಲ್ಪ ಹೊತ್ತು ಕಾಣಿಸಿಕೊಂಡಿತ್ತು. ಜಿಲ್ಲೆಯಲ್ಲಿ 24 ಗಂಟೆಯ ಅವಧಿಯಲ್ಲಿ 56 ಮಿ.ಮೀ ಮಳೆಯಾಗಿದೆ. ಇದು ವಾಡಿಕೆ ಮಳೆಗಿಂತ ಜು 9ರ ತನಕ1,071.5 ಮಿ.ಮೀ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ ಈ ಅವಧಿಯಲ್ಲಿ ಕಳೆದ ವರ್ಷ 1, 522.2 ಮಳೆಯಾಗಿತ್ತು.ಮಳೆಯಿಂದಾಗಿ ಈ ವರೆಗೆ 5 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಓರ್ವ ಬಲಿಯಾಗಿದ್ದಾನೆ ಹಾಗೆ 4 ಮಂದಿ ಗಾಯಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಮಳೆಯ ಅಬ್ಬರ ಹೇಗಿರಲಿದೆ ಎಂದು ಕಾದುನೋಡಬೇಕಿದೆ.



