ಉಡುಪಿ: ಪತ್ರಕರ್ತರು ಕನಸು ಕಾಣಬೇಕಾಗಿದೆ. ದೊರೆತ ಅವಕಾಶವನ್ನು ಬಳಸಿಕೊಳ್ಳಬೇಕು. ನಮ್ಮ ಕೆಲಸದ ಜೊತೆಗೆ ಇತರರ ಸಮಸ್ಯೆಗೆ ಮಿಡಿಯುವುದು ಮುಖ್ಯ. ನಮ್ಮ ಕೆಲಸಗಳ ಮೂಲಕ ಸಣ್ಣ ಸೇವೆಯ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಬಹುದಾಗಿದೆ ಎಂದು ಮಣಿಪಾಲ ಎಂಐಸಿಯ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್ ಇದರ ಪ್ರೋಫೆಸರ್ ಆಫ್ ಪ್ರಾಕ್ಟಿಸ್ ಸತ್ಯಬೋಧ ಜೋಶಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆಯನ್ನು ಕರ್ನಾಟಕದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ್’ ಇದರ ಮೂಲಪ್ರತಿಯನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜವನ್ನು ಸುಧಾರಿಸಲು ಹೊರಟ ನಾವು ನಮ್ಮ ಬದುಕನ್ನು ಕೂಡ ನೋಡಿಕೊಳ್ಳಬೇಕಾಗುತ್ತದೆ. ಅದರ ಕಡೆ ಕೂಡ ನಾವು ಲಕ್ಷ ವಹಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಈ ಕ್ಷೇತ್ರ ಸುಂದರ ಆಗಿರಲು ಏನು ಮಾಡಬೇಕು ಎಂಬುದರ ಬಗ್ಗೆಯೂ ನಾವೆಲ್ಲ ಚಿಂತನೆ ಮಾಡಬೇಕು. ನಮ್ಮ ಯೋಗಕ್ಷೇಮ ಕೂಡ ಮುಖ್ಯ ಎಂದರು.
ಜನರು ಏನು ನೋಡುತ್ತಾರೆಯೇ ಅದನ್ನೇ ಟಿವಿ ಮಾಧ್ಯಮಗಳು ತೋರಿಸುತ್ತಾರೆ. ಸಾಹಿತ್ಯದ ಬಗ್ಗೆ ತೋರಿಸಿದರೆ ಜನ ನೋಡುತ್ತಾರೆ. ಚಾನೆಲ್‌ಗಳ ಪತ್ರಿಕೋದ್ಯಮದಲ್ಲಿ ಎಲ್ಲ ಸಾಹಿತ್ಯದ ಬಗ್ಗೆ ಮಾತನಾಡಿದರೆ ನೋಡುವವರು ಇಲ್ಲ. ಜನ ಇದನ್ನೇ ಬಯಸುತ್ತಾರೆ. ಹಾಗಾಗಿ ಮಾಧ್ಯಮದ ಕೂಡ ಅದನ್ನೇ ತೋರಿಸುತ್ತದೆ. ಆದುದರಿಂದ ನಾವು ಕೂಡ ಸಮಾಜದ ಉದ್ಧಾರಕ್ಕೆ ಕಾರಣ ವಾಗಬೇಕಾಗಿದೆ. ಸಮಾಜದಕ್ಕೆ ಏನು ಬೇಕು ಎಂಬುದನ್ನು ಜನ ತೀರ್ಮಾನ ಮಾಡಬೇಕು. ಆ ಮೂಲಕ ನಾವು ಕೂಡ ಉದ್ಧಾರ ಆಗಬೇಕಾದರೆ ಜನ ಕೂಡ ಬದಲಾಗಬೇಕಾಗಿದೆ ಎಂದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ ಅವರು ಪೊಲೀಸ್ ತನಿಖೆಯಲ್ಲಿ ಮಾಧ್ಯಮಗಳ ಪಾತ್ರ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ, ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಉಜ್ವಲ್ ಗ್ರೂಪ್‌ನ ಆಡಳಿತ ನಿರ್ದೇಶಕ ಅಜಯ್ ಪಿ.ಶೆಟ್ಟಿ ಮಾತನಾಡಿದರು.
ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸ ಲಾಯಿತು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಮಂಜುನಾಥ ಶೆಣೈ ಜನ್ನಾಡಿ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ಸಲ್ಲಿಸಲಾಯಿತು. ನಿವೃತ್ತ ಉಪಸಂಪಾದಕ ಜಯಾನಂದ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಅತಿಥಿಗಳ ಪರಿಚಯವನ್ನು ಸಂಘದ ಕಾರ್ಯದರ್ಶಿ ರಹೀಂ ಉಜಿರೆ, ಸನ್ಮಾನಿತರ ಪರಿಚಯವನ್ನು ಕುಂದಾಪುರ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರಭಾಕರ ಆಚಾರ್ಯ ಚಿತ್ತೂರು ಮಾಡಿದರು. ವಿದ್ಯಾರ್ಥಿಗಳ ಪಟ್ಟಿಯನ್ನು ಮೈಕಲ್ ರೋಡ್ರಿಗಸ್ ವಾಚಿಸಿದರು
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…