ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಚಾರ್ಯ ( 27) ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.
ಜೂ.೨೮ ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ ೧೧.೫೦ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್‌ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್‌ ಢಿಕ್ಕಿ ಹೊಡೆದು ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್‌ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್‌ ಫಸ್ಟ್‌ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್‌ ಆಗಿದ್ದ ಗಣೇಶ್‌, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಟಿಪ್ಪರ್‌ ಲಾರಿ ಚಾಲಕ ಮಹಮ್ಮದ್‌ ಹನೀಫ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಗಣೇಶ್‌ ಆಚಾರ್ಯ ಶಸ್ತ್ರಚಿಕಿತ್ಸೆಗೆ ರೂ.10 ಲಕ್ಷ ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್‌ ಮೂಲಕ ದಾನಿಗಳ ಸಹಕಾರವನ್ನು ಕೋರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!