ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.
ಜೂ.೨೮ ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ ೧೧.೫೦ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಟಿಪ್ಪರ್ ಲಾರಿ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ ರೂ.10 ಲಕ್ಷ ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್ ಮೂಲಕ ದಾನಿಗಳ ಸಹಕಾರವನ್ನು ಕೋರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…