ಇತರೆ

ಮುಲ್ಕಿ : ಕನ್ನಡ ಸಂಸ್ಕೃತ ಸಾಹಿತ್ಯರಂಗದ ಸವ್ಯಸಾಚಿ ‘ಮೋಹನದಾಸ ಸುರತ್ಕಲ್’ ಇವರಿಗೆ ಕೊ. ಅ. ಉಡುಪ ಪ್ರಶಸ್ತಿ.

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ| ಕೊ. ಅ. ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಗೌರವಪೂರ್ವಕವಾಗಿ ನೀಡಲಾಗುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಸಂಸ್ಕೃತ ಸಾಹಿತ್ಯರಂಗದ ಸವ್ಯಸಾಚಿ ಮೋಹನದಾಸ ಸುರತ್ಕಲ್ ಇವರಿಗೆ ನೀಡಲಾಗುವುದು. ಇವರು ಸಂಸ್ಕೃತ ಮತ್ತು ಕನ್ನಡ ಭಾಷಾ ವಿದ್ವಾಂಸರು.

ಆದಿಚುಂಚನಗಿರಿಯಲ್ಲಿ ವೇದಾಂತ ಶಾಸ್ತ್ರ ಅಧ್ಯಯನ ಮತ್ತು ಪಾಲ್ಘಾಟ್ ಕೇಳಪ್ಪನ್ ವಾರಿಯರ್‌ರವರಲ್ಲಿ ಜ್ಯೋತಿಷ ಮತ್ತು ಮಂತ್ರಶಾಸ್ತ್ರದ ಅಧ್ಯಯನ ನಡೆಸಿದವರು.
ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿದ ಇವರು ಅಗ್ನಿ ಮತ್ತು ಪುರವಣಿ ಪತ್ರಿಕೆಯ ಸಂಪಾದಕರಾಗಿ ರಾಜಕೀಯ ಮತ್ತು ಸಾಮಾಜಿಕ ರಂಗದ ಕ್ರಾಂತಿಕಾರಿ ಬರಹಗಾರರೆಂದು ಗುರುತಿಸಿಕೊಂಡವರು. ರಾಜ್ಯದ ಹಲವಾರು ಹಿರಿಯ ಪತ್ರಿಕೆಗಳ ಬರಹಗಾರರ ಬಳಗದ ಓರ್ವರಾಗಿ ಸಾವಿರಾರು ಲೇಖನಗಳನ್ನು ಪ್ರಚುರ ಪಡಿಸಿದ್ದಾರೆ. ಮಾತ್ರವಲ್ಲದೆ ಇವರ ಬರಹಗಳು ಯುಗಪುರುಷ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಾ ಬಂದಿವೆ.
ಪ್ರಶ್ನೋಪನಿಷತ್, ಕೇನೋಪನಿಷತ್, ಕಠೋಪನಿಷತ್ ಈ ಮೂರು ಉಪನಿಷತ್ ಗ್ರಂಥಗಳನ್ನು ಕನ್ನಡ ಭಾಷೆಗೆ ಪದ್ಯರೂಪದಲ್ಲಿ ಅನುವಾದ ಮಾಡಿ ಸಾರಸ್ವತ ಲೋಕದ ಗಮನ ಸೆಳೆದಿದ್ದಾರೆ. ವಿವಿಧ ಪತ್ರಿಕೆ ಪ್ರಕಟಿತ ಲೇಖನ ಸಂಕಲನ, ಕಾದಂಬರಿ, ಕವಿತಾ ಸಂಕಲನ ಸಹಿತ ಒಟ್ಟು 20 ಕೃತಿಗಳು ಪ್ರಕಟಗೊಂಡಿರುತ್ತದೆ. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಒಟ್ಟು 10 ಸಮ್ಮೇಳನ ಮತ್ತು ನೂರಾರು ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಡೆಸಿರುತ್ತಾರೆ.
ಪ್ರಸ್ತುತ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯೀ ದೇವಾಲಯದ ಧರ್ಮದರ್ಶಿಗಳಾಗಿ ಕಳೆದ ಹದಿಮೂರು ವಷಗಳಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಮೂಲಕ ಸಮಾಜದ ದೀನ ದಲಿತರ ಕಂಕಣಭಾಗ್ಯದಾತನೆಂದು ಗುರುತಿಸಲ್ಪಟ್ಟಿದ್ದಾರೆ. 1997ರ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸನ್ಮಾನ, ಸುರತ್ಕಲ್ ಲಯನ್ಸ್ ಕ್ಲಬ್ ಸನ್ಮಾನ, ಮುಲ್ಕಿ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಸನ್ಮಾನ, ಯುಗಪುರುಷ ಸ್ವಾತಂತ್ರ್ಯೋತ್ಸವ ಸನ್ಮಾನ ಹೀಗೆ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನ ಸ್ವೀಕರಿಸಿರುವರು. ಕೊ. ಅ. ಉಡುಪ ಪ್ರಶಸ್ತಿಯನ್ನು ಇದೇ ಜುಲೈ 24ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಜರಗಲಿರುವ ಸಮಾರಂಭದಲ್ಲಿ ರೂ. 10,000/- ನಗದು, ಗೌರವ ಫಲಕ, ಪ್ರಶಸ್ತಿ ಪತ್ರದೊಂದಿಗೆ ಪ್ರದಾನ ಮಾಡಲಾಗುವುದು ಎಂದು ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

9 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago