ಜನ ಮನದ ನಾಡಿ ಮಿಡಿತ

Advertisement

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್ ಗೆ ಸೇರ್ಪಡೆ

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. 26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಪಂನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದರು. ಎಸ್‌ಟಿ ಮೀಸಲಾತಿಯಲ್ಲಿ ಶೋಭಾ ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 13 ಸದಸ್ಯರೊಂದಿಗೆ ಸಮಬಲ ಸಾಧಿಸಿದ್ದು, ಪಂಚಾಯತ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.


ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ನಾಯಕರಾದ ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಗ್ರಾಪಂ ಸದಸ್ಯರಾದ ಸತೀಶ್ ನಾಯಕ್, ಸುರೇಶ್ ನಾಯಕ್, ಪ್ರಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ವೆಂಕಟೇಶ್ ಕುಲಾಲ್, ರವಿರಾಜ್ ಲಕ್ಷ್ಮೀನಗರ, ಮೀನಾ ಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ಮಂಜುನಾಥ್ ಆಚಾರ್ಯ, ಅನುಷಾ ಆಚಾರ್ಯ, ವಿನಯ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!