ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. 26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಪಂನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದರು. ಎಸ್‌ಟಿ ಮೀಸಲಾತಿಯಲ್ಲಿ ಶೋಭಾ ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 13 ಸದಸ್ಯರೊಂದಿಗೆ ಸಮಬಲ ಸಾಧಿಸಿದ್ದು, ಪಂಚಾಯತ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ನಾಯಕರಾದ ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಗ್ರಾಪಂ ಸದಸ್ಯರಾದ ಸತೀಶ್ ನಾಯಕ್, ಸುರೇಶ್ ನಾಯಕ್, ಪ್ರಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ವೆಂಕಟೇಶ್ ಕುಲಾಲ್, ರವಿರಾಜ್ ಲಕ್ಷ್ಮೀನಗರ, ಮೀನಾ ಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ಮಂಜುನಾಥ್ ಆಚಾರ್ಯ, ಅನುಷಾ ಆಚಾರ್ಯ, ವಿನಯ ಆಚಾರ್ಯ ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…