ಜನ ಮನದ ನಾಡಿ ಮಿಡಿತ

Advertisement

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ: ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿಯ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದಾರೆ. ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್ ನನ್ನು ಹತ್ಯೆ ಮಾಡಿದವರು , ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು ,ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರೂ ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!