ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿಯ ಶ್ರೀ ನಾರಾಯಣ ಗುರು ಶಾಲೆ ವಿದ್ಯಾರ್ಥಿ ಸಂಸತ್‌ ಉದ್ಘಾಟನೆ


,ಮೂಲ್ಕಿ:ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ,ಸಮರ್ಪಣಾ ಮನೋಭಾವ ಹಾಗೂ ಕಠಿಣ ನಿರ್ಧಾರವಿದ್ದಾಗ ಮಾತ್ರ ಯಶಸ್ಸು ಸಾಧ್ಯ, ನಮ್ಮಲ್ಲಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಾಗ ಯಶಸ್ಸು ತನ್ನಿಂದ ತಾನೇ ನಮ್ಮದಾಗುತ್ತದೆಯೆಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಹೇಳಿದರು.

ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ಜರಗಿದ ಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ವಹಿಸಿದ್ದು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ .ಶಾಲಾ ಹಂತದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.ಕಾಲೇಜು ವಿದ್ಯಾರ್ಥಿ ನಾಯಕ ರಿಯಾನ್ ಪ್ರಣಿತ್ , ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್‌ ಜೊತೆ ಕಾಲೇಜು ಸಂಸತ್ತಿನ ಇತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು. ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಆಡಳಿತ ಮಂಡಳಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್ ,ಹೇಮರಾಜ್ ಕೆ, ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲರಾದ ಯತೀಶ್ ಅಮೀನ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಬಾಲಚಂದ್ರ ಸನಿಲ್‌ ಸ್ವಾಗತಿಸಿದರು, ಪ್ರಾಂಶುಪಾಲ ಯತೀಶ್‌ ಅಮೀನ್ ವಂದಿಸಿದರು.ಉಪನ್ಯಾಸಕಿಯರಾದ ವನಜ ವಾಸು ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!