,ಮೂಲ್ಕಿ:ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ,ಸಮರ್ಪಣಾ ಮನೋಭಾವ ಹಾಗೂ ಕಠಿಣ ನಿರ್ಧಾರವಿದ್ದಾಗ ಮಾತ್ರ ಯಶಸ್ಸು ಸಾಧ್ಯ, ನಮ್ಮಲ್ಲಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಾಗ ಯಶಸ್ಸು ತನ್ನಿಂದ ತಾನೇ ನಮ್ಮದಾಗುತ್ತದೆಯೆಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಹೇಳಿದರು.
ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ಜರಗಿದ ಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ವಹಿಸಿದ್ದು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ .ಶಾಲಾ ಹಂತದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.ಕಾಲೇಜು ವಿದ್ಯಾರ್ಥಿ ನಾಯಕ ರಿಯಾನ್ ಪ್ರಣಿತ್ , ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಜೊತೆ ಕಾಲೇಜು ಸಂಸತ್ತಿನ ಇತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು. ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಆಡಳಿತ ಮಂಡಳಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್ ,ಹೇಮರಾಜ್ ಕೆ, ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲರಾದ ಯತೀಶ್ ಅಮೀನ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಬಾಲಚಂದ್ರ ಸನಿಲ್ ಸ್ವಾಗತಿಸಿದರು, ಪ್ರಾಂಶುಪಾಲ ಯತೀಶ್ ಅಮೀನ್ ವಂದಿಸಿದರು.ಉಪನ್ಯಾಸಕಿಯರಾದ ವನಜ ವಾಸು ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…