ಮಂಗಳೂರು: ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಬಳಿ ಭಂಡಾರಿ ಬಿಲ‌್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್‌ಗೆ ದೂರು ನೀಡಿದೆ.
ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡಸ್೯ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, ಸುರಕ್ಷೆಗಾಗಿ ನಿರ್ಮಿಸುತ್ತಿರುವ ರಿಟೈನಿಂಗ್ ವಾಲ್ ಕಾಮಗಾರಿ ತುಂಬಾ ನಿಧಾನಗತಿಯಲ್ಲಿದೆ ಎಂದು ಅದರಲ್ಲಿ ಆಪಾದಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಕಾಮಗಾರಿ ಆರಂಭಿಸುವಾಗ ಭಂಡಾರಿ ಬಿಲ್ಡಸ್೯ ನ ಮುಖ್ಯಸ್ಥರಾದ ಲಕ್ಷ್ಮೀಶ ಭಂಡಾರಿ ಅವರು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿಯೂ, ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾಗುವವರೆಗೆ ಪೈಪ್ ಅಳವಡಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದಾಗಿಯೂ ಭರವಸೆ ನೀಡಿದ್ದರು. ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾದ ಬಳಿಕ ಹಿಂದಿದ್ದ ರೀತಿಯಲ್ಲೇ ಚರಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮಾತಿಗೆ ಬದ್ಧರಾಗಿರದ ಕಾರಣ ಈಗ ರಾಮಕೃಷ್ಣ ಶಿಕ್ಷಣ ಸಂಸ್ಥೆಗೆ ಅಪಾಯದ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಮುಂಗಾರು ಬಿರುಸುಗೊಂಡಿದ್ದು, ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾಗದ ಕಾರಣ ಮಣ್ಣು ಸಡಿಲಗೊಂಡು ಜರಿದು ಬೀಳುವ ಸಾಧ್ಯತೆಯೂ ಇದೆ. ಒಂದೊಮ್ಮೆ ಹೀಗಾದರೆ ಕಾಲೇಜಿನ ಕಟ್ಟಡ ಹಾಗೂ ಅದರಲ್ಲಿರುವ ಸಾವಿರಾರು ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಲಿದೆ. ಆದ್ದರಿಂದ ಕೂಡಲೇ ತಾವು ಮಧ್ಯಪ್ರವೇಶಿಸಿ ಭಂಡಾರಿ ಬಿಲ್ಡರ್ಸ್ ಸಂಸ್ಥೆಯಿಂದ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಮೇಯರ್ ಗೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಮೇ ತಿಂಗಳ 27ರಂದು ಈ ಸಂಬಂಧ ಭಂಡಾರಿ ಬಿಲ್ಡರ್ಸ್‌ನ ಮಾಲಕರಾದ ಲಕ್ಷ್ಮೀಶ ಭಂಡಾರಿಗೆ ಈ ಸಂಬಂಧ ನೋಟಿಸ್ ನೀಡಿ, ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದಕ್ಕೆ ಯಾವುದೇ ಪೂರಕ ಸ್ಪಂದನೆ ಸಿಗದ ಕಾರಣ ಜೂನ್ 27ರಂದು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಮುಖ್ಯಸ್ಥರಿಗೆ ಬಂಟರ ಸಂಘದ ವತಿಯಿಂದ ದೂರು ನೀಡಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…