ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ- ಫಲಿಮಾರ್ ಸಂಪರ್ಕ ಸೇತುವೆ ಕುಸಿತದ ಭೀತಿಯಲ್ಲಿದ್ದು ಸ್ಥಳೀಯರ ದೂರಿನಂತೆ ಜಿಲ್ಲಾಡಳಿತ ಎಚ್ಚೆತ್ತು ಘನ ವಾಹನ ಸಂಚಾರ ನಿಷೇಧಿಸಲಾಗಿದೆ
ಸೇತುವೆಯ ಅಡಿ ಭಾಗದಲ್ಲಿ ಬೀಮ್ ಗಳ ಸಿಮೆಂಟಿನ ತುಂಡುಗಳು ಬೀಳುತ್ತಿದ್ದು ಕಬ್ಬಿಣದ ಸರಳುಗಳು ಕಾಣುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪ್ರಧಾನ ಸಂಪರ್ಕಕ್ಕೆ ಈ ಸೇತುವೆ ಕಾರಣವಾಗಿದ್ದು ಸೇತುವೆ ಕುಸಿತಕ್ಕೆ ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಕೂಡ ಕಾರಣವಾಗಿದೆ
ಈ ಭಾಗದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಇಲ್ಲದಿರುವುದು ದಂಧೆ ಕೋರರಿಗೆ ವರದಾನವಾಗಿದೆ.
ಬಳ್ಕುಂಜೆ ಭಾಗದಿಂದ ಫಲಿಮಾರು, ಉಡುಪಿ ಕಾರ್ಕಳ ನಿಟ್ಟೆ, ಬೆಳ್ಮಣ್ ಕುದುರೆಮುಖ ಹೆಬ್ರಿ ಸಾಗರ ಮೊದಲಾದ ಕಡೆಗೆ ಬಹಳ ಹತ್ತಿರದ ರಸ್ತೆಯಾಗಿದ್ದು ಶಾಲಾ ಮಕ್ಕಳು ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
1979-80ರಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕ ನಿರ್ಮಾಣಗೊಂಡ ಈ ಸೇತುವೆ ಕಳೆದ 41 ವರ್ಷಗಳಿಂದ ಈ ಸೇತುವೆ ನಿರ್ವಹಣೆಯಾಗಿಲ್ಲ ,ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಯಲ್ಲಿ ಭಾರವಾದ ವಾಹನಗಳು ಸಂಚರಿಸುವಾಗ ಭಾರಿ ಗಾತ್ರದ ಶಬ್ದ ಕೇಳಿ ಬರುತ್ತಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಈ ಬಗ್ಗೆ ಸ್ಥಳೀಯರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಜಿಲ್ಲಾಡಳಿತದಿಂದ ಘನವಾಹನ ಸಂಚಾರ ನಿಷೇಧದ ಬಗ್ಗೆ ಪ್ರಕಟಣೆ ನೀಡಿ ಸ್ಥಳದಲ್ಲಿ ನಾಮ ಫಲಕ ಅಳವಡಿಸಿದ್ದರೂ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸೇತುವೆ ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅಮರ್ ಕರ್ನೀರೆ ಒತ್ತಾಯಿಸಿದ್ದಾರೆ
ವರದಿ : ಗಣೇಶ್ ಪಂಜ ಅಭಿಮತ ಟಿವಿ ಮೂಲ್ಕಿ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…