ಬಂಟ್ವಾಳ: ರಾ.ಹೆ.೭೫ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್. ಟಿ.ಸಿ ಬಸ್ಸು ಢಿಕ್ಕಿ ಹಾಗೂ ದ್ವಿಚಕ್ರ ವಾಹನ ಢಿಕ್ಕಿ ಹೊಡೆದುಕೊಂಡು ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ.

ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ಸು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



