ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಹಾಗೂ ಮಕ್ಕಳು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.



ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಹೆದ್ದಾರಿ ನಡುವಿನ ದಿವೈಡರ್ ಗೆ ಡಿಕ್ಕಿ ಹೊಡೆದು ಒಂದು ಸುತ್ತು ತಿರುಗಿ ಉಡುಪಿ ಕಡೆಗೆ ಮುಖ ಮಾಡಿ ಸಿನಮೀಯ ಮಾದರಿಯಲ್ಲಿ,ಮಂಗಳೂರು ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಅಪಘಾತದ ರಭಸಕ್ಕೆ ಎರಡು ಕಾರಿಗೆ ಹಾನಿಯಾಗಿದ್ದು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಕೂಡಲೇ ಟ್ರಾಫಿಕ್ ಪೊಲೀಸರು, ಹೆದ್ದಾರಿ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಟೋಯಿಂಗ್ ಯಂತ್ರದ ಮೂಲಕ ಕಾರನ್ನು ಸ್ಥಳದಿಂದ ತೆರವುಗೊಳಿಸಲಾಯಿತು.
ಅಪಘಾತದ ಗಾಯಾಳುಗಳ ಬಗ್ಗೆ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.




