ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ವಿಧಿವಶರಾದರು.
ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆ ಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಕೆಲವು ವರ್ಷಗಳಿಂದ ಪುತ್ತೂರು ತಾಲೂಕಿನ ಕೂರ ಎಂಬಲ್ಲಿ ಫಝಲ್ ಎಜುಕೇಶನಲ್ ಸೆಂಟರ್ ಸಂಸ್ಥೆ ನಡಸುತ್ತಿದ್ದರು. ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಕೇರಳದ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಮೃತದೇಹ ಇಂದು ರಾತ್ರಿ 9 ಗಂಟೆಗೆ ಪುತ್ತೂರು ತಾಲೂಕಿನ ಕೂರದಲ್ಲಿ ಅಂತಿಮ ದರ್ಶನ ಹಾಗೂ ದಫನ ಕಾರ್ಯ ನಡೆಯಲಿದೆ.
ಅವರ ನಿಧನಕ್ಕೆ ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝೀಮ್ ಮುಕಚೇರಿ ಉಪಾಧ್ಯಕ್ಷ ಅಶ್ರಫ್ ರೈ ಟ್ ವೆ, ಹಸೈನಾರ್, ಕಾರ್ಯದರ್ಶಿ ಮುಸ್ತಫಾ ಮದನಿ,ನಗರ ಸಹಿತ ಸಮಿತಿ ಸದಸ್ಯರು , ಮಾಜಿ ಅಧ್ಯಕ್ಷ ರಶೀದ್ ಹಾಜಿ, ಅಬ್ದುಲ್ ರಶೀದ್ ಝೈನಿ ಸಂತಾಪ ಸೂಚಿಸಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…