ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಕಳೆದ ಕೆಲವು ದಿನಗಳಿಂದ ಬಹಳ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ.



