ಉಡುಪಿ: ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತೋರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮರಿ ಆನೆಯು ಕೆರೆಕಟ್ಟೆ ಪರಿಸರದಿಂದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಹಲಸಿನ ಹಣ್ಣು ತಿನ್ನಲು ಜನವಸತಿ ಪ್ರದೇಶಕ್ಕೆ ಬಂದಿದ್ದು, ಸ್ಥಳೀಯ ಗ್ರಾಮಸ್ಥರ ಗದ್ದೆಗಳಲ್ಲಿ ದಾಂಧಲೆ ನಡೆಸಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಸ್ಥಳದಿಂದ ಓಡಿಸಿದರು. ಪರಿಸರದ ನಾಲ್ಕಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಲೆದಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಸುವ ಮೂಲಕ ಆನೆಯನ್ನು ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…