ಉಡುಪಿ: ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 52 ವಯಸ್ಸಾಗಿತ್ತು.
ಇವರು ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು. ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಬಿಲ್ಲವ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿದ್ದರು.
ಡಾ. ಎಸ್. ಜಾನಕಿ ಅವರ ಕಟ್ಟಾ ಅಭಿಮಾನಿಯಾಗಿ ಪ್ರತಿ ವರ್ಷ ಕೋಟೇಶ್ವರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಆಯೋಜಿಸಿ ನಾಡಿನ ಹಲವು ಮಂದಿ ಗಣ್ಯ ಹಾಡುಗಾರರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.
ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇಂದು ಸಂಜೆ 4.30 ರಿಂದ ಮೃತರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…