ಉಡುಪಿ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.
ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಏಕಾಏಕಿಯಾಗಿ ರಸ್ತೆಯ ಬದಿಯ ಮೋರಿಯ ದಂಡೆಗೆ ಬಡಿದಿದೆ. ಚಾಲಕ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು, ಮರಳಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ದಂಡೆಗೆ ಬಡಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿ ಹಾಗೂ ಪೊಲೀಸರು ಹೆದ್ದಾರಿಗೆ ಅಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…