ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿಯಲ್ಲಿ ನೀರಿನ ಮಟ್ಟ ಹೆಚ್ಚಳ: ನದೀ ತೀರದ ಜನರಿಗೆ ಎಚ್ಚರಿಕೆ

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ‌ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ. ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.


ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.
ನದೀ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದೀ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.
ಜಿಲ್ಲೆಯಲ್ಲಿ ಅಷ್ಟಾಗಿ ಮಳೆಯಿಲ್ಲದಕಾರಣ ಸಂಜೆ ವೇಳೆ ನೀರಿನ ಹರಿವು ಇಳಿಮುಖವಾಗಬಹುದು.ಆದರೆ ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗಿದೆ.
ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!