ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ. ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.
ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.
ನದೀ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದೀ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.
ಜಿಲ್ಲೆಯಲ್ಲಿ ಅಷ್ಟಾಗಿ ಮಳೆಯಿಲ್ಲದಕಾರಣ ಸಂಜೆ ವೇಳೆ ನೀರಿನ ಹರಿವು ಇಳಿಮುಖವಾಗಬಹುದು.ಆದರೆ ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗಿದೆ.
ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…