ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಸಾಭಿತು ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.
ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇತ್ತೀಚೆಗೆಯಷ್ಟೇ ಕ್ಯಾನ್ಸರ್ ಸೆಂಟರ್ ಒಂದನ್ನು ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.
ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್‌ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.
ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…