ಚಲನಚಿತ್ರ

ಉಚಿತ ಕ್ಯಾನ್ಸರ್ ಚಿಕಿತ್ಸಾ ಪರೀಕ್ಷಾ ಶಿಬಿರವನ್ನು ಪ್ರಾರಂಭಿಸಿದ ನಟ ಮೆಗಾಸ್ಟಾರ್ : ನಟನ ಕೆಲಸಕ್ಕೆ ಭಾರೀ ಮೆಚ್ಚುಗೆ!

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಸಾಭಿತು ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚೆಗೆಯಷ್ಟೇ ಕ್ಯಾನ್ಸರ್​ ಸೆಂಟರ್​ ಒಂದನ್ನು ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ​ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್​ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್​ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.

ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್​ನ ಜುಬಿಲಿ ಹಿಲ್ಸ್​​ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್‌ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

3 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

3 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

3 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

3 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

3 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

3 hours ago