ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್

ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು: ಕೆವಿಪಿ

ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್

ಕಾಸರಗೋಡು : ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಇಲ್ಲಿ ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ಅರ್ಥವಾಗುತ್ತದೆ. ನಿಮ್ಮ ಜೊತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗಡಿ ನಾಡಿನ ಕಾಸರಗೊಡು ಪತ್ರಕರ್ತರ ಬಸ್ ಪಾಸ್ ಕೊಡಿಸುವ ಭರವಸೆ ನೀಡಿದ ಕೆ.ವಿ.ಪ್ರಭಾಕರ್ ಅವರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜೊತೆಗೆ ಮಾತನಾಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ‌ ಬೆಂಗಳೂರಿನಲ್ಲಿ ನಾವು ರಾಜ್ಯೋತ್ಸವ ಕನ್ನಡಿಗರಾಗಿದ್ದೇವೆ. ಆದರೆ ನೀವು ವರ್ಷದ ಅನುಕಾಲವೂ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಮತ್ತು ಅಭಿಮಾನದ ಸಂಗತಿ ಎಂದರು. ಕಾಸರಗೋಡು ದತ್ತಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!