ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು: ಕೆವಿಪಿ
ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್
ಕಾಸರಗೋಡು : ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಇಲ್ಲಿ ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ಅರ್ಥವಾಗುತ್ತದೆ. ನಿಮ್ಮ ಜೊತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗಡಿ ನಾಡಿನ ಕಾಸರಗೊಡು ಪತ್ರಕರ್ತರ ಬಸ್ ಪಾಸ್ ಕೊಡಿಸುವ ಭರವಸೆ ನೀಡಿದ ಕೆ.ವಿ.ಪ್ರಭಾಕರ್ ಅವರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜೊತೆಗೆ ಮಾತನಾಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ನಾವು ರಾಜ್ಯೋತ್ಸವ ಕನ್ನಡಿಗರಾಗಿದ್ದೇವೆ. ಆದರೆ ನೀವು ವರ್ಷದ ಅನುಕಾಲವೂ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಮತ್ತು ಅಭಿಮಾನದ ಸಂಗತಿ ಎಂದರು. ಕಾಸರಗೋಡು ದತ್ತಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…