ಜನ ಮನದ ನಾಡಿ ಮಿಡಿತ

Advertisement

ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾ*ವು, ಮುಂದುವರಿದ ಶೋಧ ಕಾರ್ಯ

ನೈಜೀರಿಯಾ: ಆಫ್ರಿಕಾದ ನೈಜೀರಿಯಾದಲ್ಲಿ ರಣ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿಯಾಗಿ ಕುಸಿದು ಬಿದ್ದ ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಾಲಾ ಸಿಬ್ಬಂದಿ ವರ್ಗ ಸೇರಿದಂತೆ ಹಲವು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿದ್ದು, ಶೋಧ ಕಾರ್ಯ ಮುಂದುವರಿದಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಆರಂಭದಲ್ಲಿ ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದು, ಅವರಲ್ಲಿ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ದುರದೃಷ್ಟವಶಾತ್​​ 22 ವಿದ್ಯಾರ್ಥಿಗಳು ಸಾವ*ನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ಹೇಳಿದ್ದಾರೆ.

ಈ ಶಾಲೆಯನ್ನು ನದಿಯ ದಡದಲ್ಲಿ ನಿರ್ಮಿಸಲಾಗಿರುವುದೇ ಈ ಅಪ*ಘಾತಕ್ಕೆ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಅಲ್ಲದೆ, ಮುನ್ನೆಚ್ಚರಿಕೆ ವಹಿಸಿ, ದುರ್ಬಲ ಕಟ್ಟಡಗಳನ್ನು ಹೊಂದಿರುವ ಮತ್ತು ನದಿ ದಡದಲ್ಲಿರುವ ರಾಜ್ಯದ ಎಲ್ಲಾ ಶಾಲಾ ಕಟ್ಟಡಗಳನ್ನು ಕೂಡಲೇ ಮುಚ್ಚುವಂತೆ ಸರ್ಕಾರ ಮನವಿ ಮಾಡಿದೆ.

ಆಫ್ರಿಕನ್ ದೇಶಗಳ ಪೈಕಿ ನೈಜೀರಿಯಾ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ನೈಜೀರಿಯಾದಲ್ಲಿ ಕಟ್ಟಡ ಕು*ಸಿತವು ಸಾಮಾನ್ಯ ಘಟನೆಯಾಗಿದ್ದರೂ, ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಹತ್ತಕ್ಕೂ ಹೆಚ್ಚು ಕಟ್ಟಡ ಕುಸಿತದ ಘಟನೆಗಳು ದಾಖಲಾಗಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!