ನೈಜೀರಿಯಾ: ಆಫ್ರಿಕಾದ ನೈಜೀರಿಯಾದಲ್ಲಿ ರಣ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿಯಾಗಿ ಕುಸಿದು ಬಿದ್ದ ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಾಲಾ ಸಿಬ್ಬಂದಿ ವರ್ಗ ಸೇರಿದಂತೆ ಹಲವು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿದ್ದು, ಶೋಧ ಕಾರ್ಯ ಮುಂದುವರಿದಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಆರಂಭದಲ್ಲಿ ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದು, ಅವರಲ್ಲಿ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ದುರದೃಷ್ಟವಶಾತ್ 22 ವಿದ್ಯಾರ್ಥಿಗಳು ಸಾವ*ನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ಹೇಳಿದ್ದಾರೆ.
ಈ ಶಾಲೆಯನ್ನು ನದಿಯ ದಡದಲ್ಲಿ ನಿರ್ಮಿಸಲಾಗಿರುವುದೇ ಈ ಅಪ*ಘಾತಕ್ಕೆ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಅಲ್ಲದೆ, ಮುನ್ನೆಚ್ಚರಿಕೆ ವಹಿಸಿ, ದುರ್ಬಲ ಕಟ್ಟಡಗಳನ್ನು ಹೊಂದಿರುವ ಮತ್ತು ನದಿ ದಡದಲ್ಲಿರುವ ರಾಜ್ಯದ ಎಲ್ಲಾ ಶಾಲಾ ಕಟ್ಟಡಗಳನ್ನು ಕೂಡಲೇ ಮುಚ್ಚುವಂತೆ ಸರ್ಕಾರ ಮನವಿ ಮಾಡಿದೆ.
ಆಫ್ರಿಕನ್ ದೇಶಗಳ ಪೈಕಿ ನೈಜೀರಿಯಾ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ನೈಜೀರಿಯಾದಲ್ಲಿ ಕಟ್ಟಡ ಕು*ಸಿತವು ಸಾಮಾನ್ಯ ಘಟನೆಯಾಗಿದ್ದರೂ, ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಹತ್ತಕ್ಕೂ ಹೆಚ್ಚು ಕಟ್ಟಡ ಕುಸಿತದ ಘಟನೆಗಳು ದಾಖಲಾಗಿವೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…