ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.
ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದುಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…