ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸೋಮಣ್ಣ ರವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ ಭಾಗದ ಜನಪ್ರತಿನಿಧಿಗಳಿಗೆ ಸಿಕ್ಕಿರುವುದು ಪುಣ್ಯ ಕಾರ್ಯ. ಯುದ್ದ ಸ್ಮಾರಕದ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ರ 25 ಲಕ್ಷ ವಿಶೇಷ ಅನುದಾನ ಲಭಿಸಿದ್ದು, ಮನಪಾ ಉಳಿದ ಖರ್ಚು ಭರಿಸುವ ಭರವಸೆ ನೀಡಿದೆ. ಅಂತೆಯೇ ನಾನು ಕೂಡಾ ನನ್ನ ಒಂದು ತಿಂಗಳ ವೇತನವಾದ 1 ಒಂದು ಲಕ್ಷವನ್ನು ಈ ಪುಣ್ಯ ಕಾರ್ಯಕ್ಕೆ ಸಮರ್ಪಿಸುತ್ತೇನೆ ಎಂದು ಘೋಷಿಸಿದರು.
ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ಸೈನಿಕರು ಈ ದೇಶದ ಹೆಮ್ಮೆ. ಅವರ ತ್ಯಾಗಕ್ಕೆ ಎಂದಿಗೂ ಸಾಟಿಯಿಲ್ಲ. ಅವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಕಮಲಾಕ್ಷಿ, ಕುಸುಮ ದೇವಾಡಿಗ, ಸಂದ್ಯಾ ವೆಂಕಟೇಶ್, ಕ್ಯಾ. ಗಣೇಶ್ ಕಾರ್ಣಿಕ್, ಮನಪಾ ಸದಸ್ಯರುಗಳು, ಮಾಜಿ ಸೈನಿಕ ಸಂಘದ ಅಧ್ಯಕ್ಷ ಶ್ರೀಕಾಂತ್ ಸೇರಿದಂತೆ ಬಿಜೆಪಿಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…