ಅಪಾರ ಪ್ರಮಾಣದ ಹಾನಿ; ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹ
ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಹತ್ತು ನಿಮಿಷದ ಮೊದಲು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಸುಮಾರು 30 ವರ್ಷಗಳ ಹಿಂದಿನ ಮನೆಯಾಗಿದ್ದು, ಕುಟುಂಬಸ್ಥರು ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದರು. ಈ ಮನೆಯಲ್ಲಿ ಒಟ್ಟು 10 ಮಂದಿ ವಾಸ ಮಾಡುತ್ತಿದ್ದರು. ಮನೆಯೊಳಗಿದ್ದ ದಾಖಲೆ ಪತ್ರ, ಮಕ್ಕಳ ಪುಸ್ತಕ, ಬಟ್ಟೆ ಬರೆ ಎಲ್ಲವೂ ಮಣ್ಣುಪಾಲಾಗಿದೆ. ಸರಕಾರ ಕೂಡಲೇ ಪರಿಹಾರ ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…