ಜನ ಮನದ ನಾಡಿ ಮಿಡಿತ

Advertisement

ಸೌತ್ ಕೆನರಾ ಗವರ್ನ್ಮೆಂಟ್ ಆಫೀಸರ್ಸ್ ಕೋ ಆಪರೇಟಿವ್ ಬ್ಯಾಂಕಿನ ತೆರವಾದ ನಿರ್ದೇಶಕರ ಸ್ಥಾನಕ್ಕೆ ಶ್ರೀ ಹೇಮಚಂದ್ರ ಬಿ. ನಾಮನಿರ್ದೇಶನ.

ಮಂಗಳೂರು: ವೇತನದಾರರ ಸಹಕಾರಿ ಬ್ಯಾಂಕ್ ಗಳ ಪೈಕಿ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ್ ಕೋ ಆಪರೇಟಿವ್ ಬ್ಯಾಂಕ್, ಅಮ್ಮೆಂಬಳ ಸುಬ್ಬ ರಾವ್ ಪೈ ರಸ್ತೆ, ಡೊಂಗರಕೇರಿ, ಮಂಗಳೂರು ಇಲ್ಲಿ ತೆರವಾದ ನಿರ್ದೇಶಕರ ಸ್ಥಾನಕ್ಕೆ ಸರ್ವಾನುಮತದಿಂದ ನಾಮ ನಿರ್ದೇಶನಗೊಂಡ ಶ್ರೀ ಹೇಮಚಂದ್ರ ಬಿ. ಇವರನ್ನು ದಿನಾಂಕ 6.7.20323 ರಂದು ಜರಗಿದ ಆಡಳಿತ ಮಂಡಳಿಯ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಪ್ರಕಾಶ್ ನಾಯಕ್ ಅವರು ಅಭಿನಂದಿಸಿದರು.

ಬ್ಯಾಂಕಿನ ನಿರ್ದೇಶಕರಾಗಿದ್ದ ಬಂದರು ಇಲಾಖೆಯ ಅಧಿಕಾರಿ ಶ್ರೀ ಎಸ್. ನಿರಂಜನ ಮೂರ್ತಿಯವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಶ್ರೀ ಹೇಮಚಂದ್ರ ಬಿ. ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ದ.ಕ. ಜಿಲ್ಲೆ, ಇವರನ್ನು ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ನಾಮನಿರ್ದೇಶನ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಮತಿ ತಿಲೋತ್ತಮ, ನಿರ್ದೇಶಕರುಗಳಾದ ಶ್ರೀಮತಿ ಸುಜಾತ, ಶ್ರೀಮತಿ ಶಶಿಕಲಾ, ಶ್ರೀ ಪದ್ಮನಾಭ ಜೋಗಿ, ಶ್ರೀ ಪ್ರದೀಪ್ ಡಿಸೋಜ, ಶ್ರೀ ಅಕ್ಷಯ್ ಭಂಡಾರ್ಕರ್, ಶ್ರೀ ಶಮಂತ್ ಕುಮಾರ್, ಶ್ರೀ ಶಿವಾನಂದ ಎಂ, ಶ್ರೀ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ, ಶ್ರೀ ಜಗದೀಶ್ ಹಾಗೂ ಬ್ಯಾಂಕಿನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲಕ್ಷ್ಮೀಶ ಎನ್. ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!